12 ಪಾಕ್‌ ಸೈನಿಕರ ಹತ್ಯೆ – ಅಫ್ಘಾನ್‌ ಮೇಲೆ ಮತ್ತೆ ಏರ್‌ಸ್ಟ್ರೈಕ್‌

– ಗಡಿಯಲ್ಲಿ ಭಾರೀ ಘರ್ಷಣೆ – ಮತ್ತೊಂದು ಯುದ್ಧ?

ಕಾಬೂಲ್‌: ಅಫ್ಘಾನಿಸ್ತಾನ (Afghanistan) ಮತ್ತು ಪಾಕಿಸ್ತಾನದ (Pakistan) ಮಧ್ಯೆ ಈಗ ಯುದ್ಧದ ಭೀತಿ ಆರಂಭವಾಗಿದೆ. ಕಾಬೂಲ್‌ ಮೇಲೆ ವಾಯುದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ತಾಲಿಬಾನ್‌(Taliban) ಈಗ ಪಾಕಿಸ್ತಾನದ ಮೇಲೆ ದಾಳಿ ನಡೆಸಿದೆ. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಕ್ಷಿಪಣಿ ದಾಳಿ ನಡೆಸಿದೆ.

ಅಫ್ಘಾನ್‌- ಪಾಕ್‌ ಗಡಿಯಾಗಿರುವ ಡುರಾಂಡ್‌ ಲೈನ್‌ನಲ್ಲಿ (Durand Line) ನಡೆದ ಘರ್ಷಣೆಯಲ್ಲಿ 12 ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದಾರೆ. ಅಷ್ಟೇ ಅಲ್ಲದೇ ಪಾಕಿಸ್ತಾನ ಸೇನೆಯ ಗಡಿಯಲ್ಲಿ ಸ್ಥಾಪಿಸಿದ್ದ 12 ಔಟ್‌ಪೋಸ್ಟಿಂಗ್‌ ವಶಪಡಿಸಿಕೊಂಡಿದೆ ಎಂದು ವರದಿಯಾಗಿದೆ.

ಕುನಾರ್ ಮತ್ತು ಹೆಲ್ಮಂಡ್ ಪ್ರಾಂತ್ಯಗಳಲ್ಲಿ ಡುರಾಂಡ್ ರೇಖೆಯಾದ್ಯಂತ ಪಾಕಿಸ್ತಾನಿ ಸೇನೆ ಹಲವಾರು ಹೊರಠಾಣೆಗಳನ್ನು ತಾಲಿಬಾನ್ ಪಡೆಗಳು ವಶಪಡಿಸಿಕೊಂಡಿವೆ ಎಂದು ಅಫ್ಘಾನ್ ರಕ್ಷಣಾ ಅಧಿಕಾರಿಯೊಬ್ಬರು ಹೇಳಿಕೆಯಲ್ಲಿ ತಿಳಿಸಿದ್ದಾರೆ. 

ಇದನ್ನೂ ಓದಿ:  

ಅಕ್ಟೋಬರ್ 9 ರಂದು, ಪಾಕಿಸ್ತಾನವು ಅಫ್ಘಾನಿಸ್ತಾನದ ಪೂರ್ವ ಪ್ರಾಂತ್ಯಗಳಲ್ಲಿ ತೆಹ್ರಿಕ್-ಇ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ನ ಹಿರಿಯ ಕಮಾಂಡರ್‌ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿತ್ತು.

ಈ ವಾಯುದಾಳಿಗಳಿಗೆ ಪ್ರತಿಕ್ರಿಯೆಯಾಗಿ, ಅಫ್ಘಾನ್ ಪಡೆಗಳು ಡುರಾಂಡ್ ರೇಖೆಯ ಬಳಿಯ ಪಾಕಿಸ್ತಾನಿ ಮಿಲಿಟರಿ ಪೋಸ್ಟ್‌ಗಳನ್ನು ಗುರಿಯಾಗಿಸಿಕೊಂಡು ಪ್ರತಿದಾಳಿ ನಡೆಸುತ್ತಿವೆ.

ಎರಡೂ ಮುಸ್ಲಿಮ್‌ ರಾಷ್ಟ್ರಗಳು ಘರ್ಷಣೆಯಲ್ಲಿ ತೊಡಗಿದ ಬೆನ್ನಲ್ಲೇ ಸೌದಿ ಅರೇಬಿಯಾ, ಕತಾರ್‌ ದೇಶಗಳು ಘರ್ಷಣೆಯನ್ನು ನಿಲ್ಲಿಸುವಂತೆ ಎರಡೂ ದೇಶಗಳ ಜೊತೆ ಮನವಿ ಮಾಡಿದೆ.

About The Author

Leave a Reply

Your email address will not be published. Required fields are marked *

error: ನಕಲು ಮಾಡಲು ಸಾಧ್ಯವಿಲ್ಲ!