ಕಥೆ: ಹೊಸ ಬೆಳಕು
ಹೊಲಿಗೆ ಯಂತ್ರವನ್ನು ತುಳಿಯುತ್ತಾ ಜಲಜ ಯೋಚಿಸತೊಡಗಿದಳು. ಯೋಚನೆಗಿಳಿದರೆ ಅವಳಿಗೆ ಹೊಲಿಗೆ ಯಂತ್ರದ ಸದ್ದು ಪಕ್ಕವಾದ್ಯದ ಹಾಗೆ ಕೇಳಿಸುತ್ತಿತ್ತು. ಒಮ್ಮೊಮ್ಮೆ ಲಹರಿ ಬಂದರೆ ಸಣ್ಣದಾಗಿ ಅವಳು ಹಾಡಿಕೊಳ್ಳುವುದಿತ್ತು. ಆಗ ಯಾರಾದರೂ ಗಿರಾಕಿಗಳು ಬಂದರೆ, ’ಏನು ಜಲಜಕ್ಕಾ, ಬಹಳ ಖುಷಿಯಲ್ಲಿರುವಂತಿದೆ’ ಎಂದು ಕೇಳುವುದುಂಟು. ಆಗ…