Breking News: ಕಾವೇರಿ ಟ್ರಾವೆಲ್ಸ್ ಬಸ್‌ಗೆ ಬೆಂಕಿ, 20ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನ

ಕರ್ನೂಲ್ (ಆಂಧ್ರಪ್ರದೇಶ): ಹೈದರಾಬಾದ್‌ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ ಹೊತ್ತಿಕೊಂಡು ಸಂಭವಿಸಿದ ಭೀಕರ ದುರಂತದಲ್ಲಿ 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ  ನಸುಕಿನ ಜಾವ 3:30ರ ಸುಮಾರಿಗೆ ಈ ಭೀಕರ ಘಟನೆ ನಡೆದಿದೆ.ಘಟನೆ ವಿವರ:ಕರ್ನೂಲ್‌ನ ಚಿನ್ನಟೇಕೂರು ಬಳಿಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಕಾವೇರಿ ಟ್ರಾವೆಲ್ಸ್‌ಗೆ ಸೇರಿದ ಬಸ್ ದುರಂತಕ್ಕೀಡಾಗಿದೆ. ಬಸ್‌ನಲ್ಲಿ ಒಟ್ಟು 41 ಪ್ರಯಾಣಿಕರಿದ್ದರು – 39 ವಯಸ್ಕರು ಮತ್ತು ಇಬ್ಬರು ಮಕ್ಕಳು.

Read More