ತುಮಕೂರು: ಟಿ. ಬೇಗೂರು ಹೈವೇಯಲ್ಲಿ ಭೀಕರ ಅಪಘಾತ: ಲಾರಿ-ಕಾರು ಡಿಕ್ಕಿ, ಇಬ್ಬರು ಸ್ಥಳದಲ್ಲೇ ಬಲಿ

ನೆಲಮಂಗಲ: (ಅಕ್ಟೋಬರ್ 24, 2025): ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲ ತಾಲೂಕಿನ ಟಿ. ಬೇಗೂರು ಬಳಿ ನಡೆದಿದೆ.ಸಂಭವಿಸಿದ್ದೇನು?:ಗದಗ ಜಿಲ್ಲೆಯ ರೋಣಾದಿಂದ ಬೆಂಗಳೂರಿನತ್ತ ಬರುತ್ತಿದ್ದ ಮಾರುತಿ ಎರ್ಟಿಗಾ ಕಾರು (KA 26 N 1435), ಮುಂಭಾಗ ಸಾಗುತ್ತಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ ಕಾರಣ, ನಿಯಂತ್ರಣ ಕಳೆದುಕೊಂಡ ಕಾರು ತೀವ್ರವಾಗಿ ಡಿಕ್ಕಿ ಹೊಡೆದಿದೆ.ಈ ದುರಂತದಲ್ಲಿ …